Breaking
13 May 2026, Wed

ವಿಪರೀತ ಮಳೆ ಹಿನ್ನೆಲೆ ಜೂ.16ರಂದು ದ. ಕ ಜಿಲ್ಲೆಯ ಐದು ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ  ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂ.16ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ :

1. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

2. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

3. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.

4. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

Leave a Reply

Your email address will not be published. Required fields are marked *