Breaking
19 Sep 2026, Sat

ರಸ್ತೆ ಬದಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ: ಓವ೯ ಸಾವು

ಬೆಳ್ತಂಗಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಜೂನ್ 15ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ನೆಲ್ಯಾಡಿ ಹೊರಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *