ಮಂಗಳೂರು: ಕಾರಿನ ನಿಯಂತ್ರಣ ತಪ್ಪಿ ಎನ್‌ಐಟಿಕೆ ಮೇಲ್ಸೇತುವೆಯಿಂದ ಕೆಳಗೆ ಬಿದ್ದಿರುವ ಘಟನೆ ಜೂನ್ 15ರ ಮಧ್ಯಾಹ್ನ ನಡೆದಿದೆ.
ಕಾರನ್ನು ಕುಂದಾಪುರ ಮೂಲದ ಪ್ರತ್ಯಕ್ಷ ಎಂಬವರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.

ಕೆಲಸದ ನಿಮಿತ್ತ ಮಂಗಳೂರಿನಿಂದ ಕುಂದಾಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಬಳಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿದ್ದ ಸರ್ವಿಸ್ ರಸ್ತೆಗೆ ಹಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಅಪಘಾತದಿಂದ ಚಾಲಕನಿಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಈ ಕುರಿತು ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


