ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ.
ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಪ್ರವಾಸಿ ತಾಣಗಲಾದ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ ,ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಜೂ.16 ರಿಂದ ಮುಂದಿನ ಆದೇಶದವರೆಗೆ ಪ್ರವೇಶಿಸಬಾರದು ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

