ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೊರ್ವ ಶವವಾಗಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬೆಂಜನಪದವು ನಿವಾಸಿ ಸಾಗರ್ ಕೆರೆಯಲ್ಲಿ ಶವವಾಗಿ ಪತ್ತೆಯಾದ ಯುವಕನಾಗಿದ್ದಾನೆ.

ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು, ಇವರಿಗಾಗಿ ಮನೆ ಮಂದಿ ,ಸ್ನೇಹಿತರು ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಅವರಿಂದು ಶವವಾಗಿ ಪತ್ತೆಯಾಗಿದ್ದಾರೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


