Breaking
21 Jun 2026, Sun

ತಂದೆ ಎಸೆದ ಬೀಡಿ ನುಂಗಿ ಮಗು ಸಾವು

ಮಂಗಳೂರು: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಮಗುವೊಂದು ಮೃತಪಟ್ಟ ಘಟನೆ ಅಡ್ಯಾರ್ನಲ್ಲಿ ಜೂನ್ 15 ರ ಭಾನುವಾರ ನಡೆದಿದೆ.

ಮೃತ ಮಗು ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಎಂದು ಗುರುತಿಸಲಾಗಿದೆ.

ಶನಿವಾರ ಮಧ್ಯಾಹ್ನ ವೇಳೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೀಡಿ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಮಗುವನ್ನು ವೆನ್ಲೋಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ ಚಿಕಿತ್ಸೆಗೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಪತಿಯ ನಿರ್ಲಕ್ಷ್ಯತನದಿಂದ ಮಗು ಮೃತಪಟ್ಟಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *