Breaking
13 May 2026, Wed

ಬಸ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಕುಂದಾಪುರ: ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಖಾಸಗಿ ಬಸ್‌ಗೆ ಬೈಕಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೂನ್ 16 ರ ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿ ಸಿಗಂದೂರು ನಿವಾಸಿ ಶರತ್(25) ಎಂದು ಗುರುತಿಸಲಾಗಿದೆ.

ಹೆಮ್ಮಾಡಿಯಿಂದ ಕೊಲ್ಲೂರು ಕಡೆಗೆ ಖಾಸಗಿ ಬಸ್ ಹೋಗುತ್ತಿದ್ದಾಗ, ವೇಗವಾಗಿ ಬಂದ ಬೈಕ್ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡ್ಯೂಕ್ ಬೈಕ್‌ನ ರೇಡಿಯೇಟರ್ ಮೇಲೆ ಪೆಟ್ರೋಲ್ ಬಿದ್ದ ಕಾರಣ, ಬೆಂಕಿ ಹೊತ್ತಿಕೊಂಡು ಬೈಕ್ ಸಂಪೂರ್ಣವಾಗಿ ಸುಟ್ಟಿದೆ.

ಸವಾರ ಶರತ್ ರಸ್ತೆಗೆ ಬಿದ್ದು, ತಲೆ ಎಡ ಕಾಲಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ಹೊತ್ತಿಗೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶಂಕರನಾರಾಯಣ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜಯರಾಮ ಡಿ ಗೌಡ ಮತ್ತು ಕುಂದಾಪುರ ಸಂಚಾರ ಠಾಣೆಯ ಎಸ್‌ಐ ಪ್ರಸಾದ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು.

ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *