ಸುಳ್ಯ: ಅಡ್ಕಾರು ಬೈತಡ್ಕ ತಿರುವಿನ ರಸ್ತೆ ಬದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಸುಳ್ಯ ಕಡೆಯಿಂದ ಪುತ್ತೂರಿನತ್ತ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕಾರು ಸಂಪೂರ್ಣವಾಗಿ ತಲೆಕೆಳಗಾಗಿ ರಸ್ತೆಯಲ್ಲಿ ಬಿದ್ದಿದ್ದು, ಘಟನೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.