Breaking
22 Jun 2025, Sun

ಬೆಳ್ತಂಗಡಿ: ವಿಪರೀತ ಮಳೆಗೆ ಮುಂಡೂರಿನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ

ಬಂದಾರು : ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಗ್ರಾಮದ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು , ಮಳೆ ಮುಂದುವರಿದರೆ ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ.

ಇಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ,ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ,ಪ್ರಮುಖರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಮನೆಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *