ಪುತ್ತೂರು: ದರ್ಬೆ ವೃತ್ತದ ಬಳಿಯ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ‘ನಂದಿಕೇಶ್ವರ ಎಲೆಕ್ಟಿಕಲ್ಸ್’ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಜೂನ್ 17ರಂದು ನಡೆದಿದೆ.
ಬೆದ್ರಾಳ ನಿವಾಸಿ ಕೇಶವ ಅವರ ಮಾಲಕತ್ವದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಇದನ್ನು ಗಮನಿಸಿದ ಸಿಬ್ಬಂದಿ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತತ್‌ಕ್ಷಣವೇ ಸ್ಥಳಕ್ಕೆ ಧಾವಿಸಿದ ಪುತ್ತೂರು ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.



