ಬಂಟ್ವಾಳ: ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ, ಶ್ರೀ ಮುರುಘೇಂದ್ರ ವನಿತಾ ಸಮಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ರಕ್ತ ನಿಧಿ ಕೇಂದ್ರ ವೆನ್‌ಲಾಕ್ ಆಸ್ಪತ್ರೆ ಮಂಗಳೂರು ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ನಯನಾಡು ಮತ್ತು ಪಿಲಾತಬೆಟ್ಟು ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಶ್ರೀ ಮುರುಘೇಂದ್ರ ಸಭಾಭವನದಲ್ಲಿ ಜೂ.22 ರಂದು ನಡೆಯಲಿದೆ.

ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

