ಸೋಮೇಶ್ವರ ಬೀಚ್‌ನಲ್ಲಿ ‘ಯೋಗ ವಿತ್ ಯೋಧ’ ಕಾರ್ಯಕ್ರಮ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂನ್ 21, ಶನಿವಾರ ಸಂಜೆ 3 ಗಂಟೆಗೆ ‘ಯೋಗ ವಿತ್ ಯೋಧ’ ಕಾರ್ಯಕ್ರಮ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಈ ಬಾರಿಯ ಯೋಗ ದಿನದ ಥೀಮ್ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಆಗಿದ್ದು, ಯೋಗದ ಮೂಲಕ ಆರೋಗ್ಯ ಹಾಗೂ ಪ್ರವಾಸೋದ್ಯಮ ಉನ್ನತಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಳೆದ ವರ್ಷ ಸಾಹಸ ಜಲಕ್ರೀಡೆಗಳ ತಾಣವಾಗಿರುವ ಸಸಿಹಿತ್ಲುವಿನಲ್ಲಿ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆದಿದ್ದು, ಈ ಬಾರಿ ಐತಿಹಾಸಿಕ ಸೋಮೇಶ್ವರ ಬೀಚ್ ನಲ್ಲಿ ನಡೆಯಲಿದೆ.

ಈ ಕಾಯ೯ಕ್ರಮದಲ್ಲಿ ಜಿಲ್ಲೆಯ ಸಾಧಕರು, ಕ್ರೀಡಾ ಸಿಬ್ಬಂದಿ, ಮಾಜಿ ಸೈನಿಕರು, ಜೀವರಕ್ಷಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *