ಮಂಗಳೂರು: ಕರಾವಳಿಯಲ್ಲಿ ಸಂಭವಿಸಿದ ಕೋಮು ಸಂಘರ್ಷದ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯಲ್ಲಿ ತಳಮಟ್ಟದ ಭಾರೀ ಸರ್ಜರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಒಟ್ಟು 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಕ್ರಮದ ಭಾಗವಾಗಿ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಶೇಖ್ ಸೇರಿದಂತೆ ಹಲವರನ್ನು ವರ್ಗಾಯಿಸಲಾಗಿದೆ.

ಭಾರಿ ವರ್ಷಗಳಿಂದ ವರ್ಗಾವಣೆ ಮಾಡಬೇಕೆಂಬ ಒತ್ತಡ ಕೇಳಿ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಪೊಲೀಸ್ ಅಧಿಕಾರಿಕಾರಿಗಳಿಗೆ ಸೂಚನೆ ಕೂಡಾ ನೀಡಲಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ನಗರ ಪೊಲೀಸ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಆದೇಶ ಹೊರಡಿಸಿದ್ದಾರೆ.
