ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಇದೇ ಭಾನುವಾರ ಜೂನ್ 22ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.

ನರಿಕೊಂಬು ಶ್ರೀ ನಾಲ್ಕೆತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ಸಮಾರಂಭ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೊಧಿಸಲಿದ್ದಾರೆ. ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಯುವ ಸಂಚಯ’ ವಾರ್ಷಿಕ ವಿಶೇಷಾಂಕ ಬಿಡುಗಡೆ ಮಾಡಲಿದ್ದಾರೆ.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಉಮೇಶ್ ಬಾಯಾರು ಗೌರವ ಉಪಸ್ಥಿತಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ ಹಾಗೂ ಸಮಾರಂಭದ ಮೊದಲು ಅಜಿಲಮೊಗಲು ಅಡ್ಯಾಲು ಯಕ್ಷಚಿಗುರು ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಚೇತನ್ ಮುಂಡಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
