ಬ್ರಹ್ಮಾವರ: ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಜೂ.19ರಂದು ರಾತ್ರಿ ನಡೆದಿದೆ.
ಕೊಲೆ ಮಾಡಿದ ಆರೋಪಿ ಗಣೇಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಗಣೇಶ್ ಪೂಜಾರಿ ವಿಪರೀತ ಮಧ್ಯ ಸೇವನೆ ಮಾಡಿ ಮನೆಗೆ ಬಂದಿದ್ದು ಪತ್ನಿ ಮೊಬೈಲ್ ನಲ್ಲಿ ನಿರತನಾಗಿದನ್ನು ನೋಡಿ ಸಿಟ್ಟಿನಿಂದ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಣೇಶ್ ಪೂಜಾರಿಯನ್ನು ಬಂಧಿಸಿಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

