Breaking
22 Mar 2026, Sun

ನಿವೃತ್ತ ಸೈನಿಕ ಪ್ರಭಾಕರನ್ ಹೃದಯಾಘಾತದಿಂದ ನಿಧನ

ಕಡಬ: ವರ್ಷದ ಹಿಂದೆ ನಿವೃತ್ತಿ ಹೊಂದಿದ್ದ ಸೈನಿಕ ಪ್ರಭಾಕರನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಒಂದು ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದ ಇವರು ಊರಿಗೆ ಆಗಮಿಸಿ ಕಳಾರ ಸಮೀಪದ ಅಲಾರ್ಮೆಯ ಅಡ್ಡಗದ್ದೆ ಬಳಿ ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು. ಪ್ರಸ್ತುತ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಜೂನ್ 18ರಂದು ತನ್ನ ಕಾರಿನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಕೂಡಲೇ ಪ್ರಭಾಕರನ್ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದು, ಈ ವೇಳೆ ಆಸ್ಪತ್ರೆಯೊಳಗೆ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಇಬ್ಬರು ಮಕ್ಕಳು ಹಾಗೂ ಹೆತ್ತವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *