ಬಂಟ್ವಾಳ : ಶ್ರೀ ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಕಲ್ಲಡ್ಕ ಗೋಳ್ತಮಜಲು ಗ್ರಾಮದ ತುಳಸಿವನ ಶ್ರೀ ಸಿದ್ದುವಿನಾಯಕ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಉಚಿತ ಟೈಲರಿಂಗ್ ತರಬೇತಿ ಶಿಬಿರದಲ್ಲಿ ವಿಶೇಷ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ, ಹಾಗೂ ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ಸದಸ್ಯ ಶ್ರೀಮತಿ ತುಳಸಿ ಉಮೇಶ್ ರವರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸತ್ಯ ಸಾಯಿ ಸೇವಾ ಸಂಸ್ಥೆಗಳ ಜಿಲ್ಲಾ ಶೈಕ್ಷಣಿಕ ಸಂಯೋಜಕಿ ಮುಕಾಂಬಿಕ ಎಸ್ ರಾವ್, ಬಂಟ್ವಾಳ ತಾಲೂಕು ಶೈಕ್ಷಣಿಕ ಸಂಯೋಜಕಿ ಶ್ರೀಮತಿ ಭಾರತಿ, ಗ್ರಾಮ ಅಭಿವೃದ್ಧಿ ಯೋಜನೆ ಯ ಬೋಳಂತೂರು ಒಕ್ಕೂಟ ಅಧ್ಯಕ್ಷ ಶ್ರೀಮತಿ ಸೀತಾ ಮೊದಲಾದವರು ಉಪಸ್ಥಿತರಿದ್ದರು.

