ವಿಶಾಖಪಟ್ಟಣಂ: ಇಂದು ಭಾರತದಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಾದ್ಯಂತ ಬಹಳ ಅದ್ದೂರಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ.
ಯೋಗ ದಿನಾಚರಣೆಯ ಪ್ರಯುಕ್ತ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಭೋಗಪುರಂನಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗಿಯಾಗಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಯೋಗ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದೇಶದ ಜನತೆಗೆ ಯೋಗ ದಿನಾಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ.

ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

