ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರಿನಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರಿಗೆ ಏಕಾಏಕಿ ಜಾನುವಾರು ಅಡ್ಡ ಬಂದು ಮೂರು ವಾಹನಗಳು ಜಖಂಗೊಂಡಿರುವ ಘಟನೆ ಜೂನ್ 20 ರಂದು ನಡೆದಿದೆ.

ಶಾಸಕರು ಉಡುಪಿ ಕಡೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದ್ದು. ಶಾಸಕರ ಕಾರಿನ ಮುಂದೆ ಏಕಾಏಕಿ ಜಾನುವಾರು ಅಡ್ಡ ಬಂದಿದ್ದು, ಸರಣಿ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

