ಅರಂತೋಡು: ಸಂಪಾಜೆ ಸಮೀಪದ ದೇವರಕೊಲ್ಲಿ ಎಂಬಲ್ಲಿ ಭತ್ತ ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು (ಜೂ.21) ನಡೆದಿದೆ.
ಮಡಿಕೇರಿಯಿಂದ ಕಾರ್ಕಳದತ್ತ ಭತ್ತದ ಲೋಡ್ ಸಾಗಿಸುತ್ತಿದ್ದ ಲಾರಿಯಲ್ಲಿ ದಾರಿ ಮಧ್ಯೆ ಬೆಂಕಿ ಹತ್ತಿಕೊಂಡಿದೆ. ಮೂಲ ಮಾಹಿತಿಯ ಪ್ರಕಾರ, ಲಾರಿಯ ಒಂದು ಟಯರ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲೈನರ್ ತೀವ್ರ ಬಿಸಿಯಾಗಿದ್ದರಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಘಟನೆಯ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಲು ಯತ್ನಿಸಿದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಾರಿಯ ಹಿಂದಿನ ಭಾಗಕ್ಕೆ ತೀವ್ರ ಹಾನಿಯಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗಿದೆ.

