ಉಡುಪಿ: ಬಾಗಲಕೋಟೆಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಕ್ಕೆ ಉಡುಪಿಯ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರಿಗೆ ಜಿಲ್ಲಾಧಿಕಾರಿಗಳು ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಉದ್ಘಾಟನಾ ಸಮಾರಂಭವು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ನಡೆಯಲಿರುವುದು ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಭಾಗವಹಿಸುವವರಿದ್ದರು ಆದರೆ ಕಾರ್ಯಕ್ರಮದಲ್ಲಿ ಅವರು ಶಿವಾಜಿ ಮಹಾರಾಜರ ಪರಂಪರೆಯ ಕುರಿತು ಉಪನ್ಯಾಸ ನೀಡುವ ಭಾಷಣದಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಂಭವವಿದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಈ ಹಿನ್ನಲೆ ಜಿಲ್ಲಾಧಿಕಾರಿಗಳು ಅವರಿಗೆ ಮೂರು ತಿಂಗಳ ಕಾಲ ಪ್ರವೇಶಿಸದಂತೆ ನಿರ್ಬಂಧವನ್ನು ಜಾರಿಗೊಳಿಸಿದ್ದಾರೆ.
