ವಿಟ್ಲ: ಅಡ್ಯನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಇಬ್ಬರೂ ಗಾಯಗೊಂಡಿರುವ ಘಟನೆ ಜೂ.22 ರಂದು ನಡೆದಿದೆ.

ಈ ಅಪಘಾತದಲ್ಲಿ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ಅವರು ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

