Breaking
7 May 2026, Thu

ಕಾಸರಗೋಡು : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕಾಸರಗೋಡು : ಬದಿಯಡ್ಕ ಸಮೀಪದ ಬಾಂಜ ತ್ತಡ್ಕ ಇಕ್ಕೇರಿ ಎಂಬಲ್ಲಿ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಘಟನೆ ಜೂ.22 ರಂದು ನಡೆದಿದೆ.

ಮೃತಪಟ್ಟವರನ್ನು ಬಾಂಜತ್ತಡ್ಕ ಇಕ್ಕೇರಿಯ ವಿ.ವಿ.ಪ್ರಕಾಶ್ (40)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದ ಪ್ರಕಾಶ್ ಜೂನ್ 18 ರಂದು ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು.

ಈ ಕುರಿತು ಅವರ ಪತ್ನಿ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪೋಲಿಸರು ತನಿಖೆ ಆರಂಭಿಸಿದ್ದರು.

ಬಳಿಕ ಇಕ್ಕೇರಿ ಸಮೀಪ ಹೊಳೆಯ ಬದಿಯಲ್ಲಿ ರವಿವಾರ(ಜೂ.22) ರಂದು ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *