ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ಸ್ಕೂಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ.ಎನ್ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಬೆಳ್ತಂಗಡಿಯ ಕಡೆಗೆ ತೆರಳುತ್ತಿದ್ದ ಇಬ್ರಾಹಿಂ ಸ್ಕೂಟರ್‌ಗೆ, ಮಂಗಳೂರಿನಿಂದ ಬೆಂಗಳೂರು ಕಡೆಗೆ ಮೀನು ಕೊಂಡುಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

