ಸುಳ್ಯ: ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ಕಾಡುಕೋಣಗಳ ಹಿಂಡು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕೆಲವು ದಿನಗಳ ಹಿಂದೆ ಮಧ್ಯರಾತ್ರಿ ವೇಳೆ ದೇವಚಳ್ಳ ಗ್ರಾಮ ಪಂಚಾಯತ್ ಬಳಿಯ ಮುಖ್ಯ ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಾಣಿಸಿಕೊಂಡಿತ್ತು. ಅದೇ ದಾರಿಯಲ್ಲಿ ವ್ಯಕ್ತಿಯೊವ೯ರು ಹಾದುಹೋಗುತ್ತಿದ್ದ ವೇಳೆ ಕಾಡುಕೋಣಗಳ ಹಿಂಡು ಕಂಡುಬಂದಿದ್ದು, ಇದೀಗ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ವಸತಿ ಪ್ರದೇಶಗಳ ಬಳಿ ಇಂತಹ ಕಾಡು ಪ್ರಾಣಿಗಳ ಸಂಚಾರವನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

