Breaking
21 Jun 2026, Sun

ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ – ಮಹಿಳೆಯ ಬಂಧನ

ಉಡುಪಿ: ನಗರದ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊವ೯ರನ್ನು ಅಹಮದಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಕೆಯನ್ನು ವಶಕ್ಕೆ ನೀಡುವಂತೆ ಈಗಾಗಲೇ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪತ್ರ ಬರೆದಿದ್ದು, ಅಲ್ಲಿ ವಿಚಾರಣೆ ಪೂರ್ಣಗೊಂಡ ಬಳಿಕ ಉಡುಪಿಗೆ ಹಸ್ತಾಂತರವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಕಳೆದ ವರ್ಷವೂ ನಗರದ ಭಾಗದಲ್ಲಿರುವ ವಿದ್ಯಾಸಂಸ್ಥೆಯೊಂದಕ್ಕೆ ಇದೇ ರೀತಿ ಹುಸಿ ಬಾಂಬ್ ಮೈಲ್ ಬಂದಿದ್ದು, ಅದರಲ್ಲಿಯೂ ಈಕೆಯ ಕೈವಾಡ ಇದೆಯೇ ಎಂಬ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *