ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅವ್ಯವಸ್ಥೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಜೂನ್ 23ರಂದು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಚಾಲನೆಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಅವರು, ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ನಂತರ, ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ಕೊಟ್ಟು ಇದುವರೆಗೆ ನಡೆದಿರುವ ಯೋಜನೆಗಳ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸ್ಮಾರ್ಟ್ ಸಿಟಿ ಎಂ ಡಿ ರಾಜು ಮತ್ತಿತರರು ಇದ್ದರು.

