Breaking
22 Mar 2026, Sun

ಜೂ .25 ಕ್ಕೆ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

ನವದೆಹಲಿ : ‘ಆ್ಯಕ್ಸಿಯಂ-4’ ಮಿಷನ್ ಉಡಾವಣೆಗೆ ಜೂನ್ 25ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ನಾಸಾ ಮಂಗಳವಾರ ಪ್ರಕಟಿಸಿದೆ.

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ ‘ಆ್ಯಕ್ಸಿಯಂ-4’ ಮಿಷನ್ ಉಡಾವಣೆ ಹಲವಾರು ಭಾರಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿತ್ತು.

ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ-4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದಾರೆ. ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆ್ಯಕ್ಸಿಯಂ-4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್ ನ ಫಾಲ್ಕನ್-9 ರಾಕೆಟ್ ಉಡಾವಣೆಗೊಳ್ಳಲಿದೆ ಎಂದು ಎಂದು ನಾಸಾ ತಿಳಿಸಿದೆ.

Leave a Reply

Your email address will not be published. Required fields are marked *