ಮರವೂರು : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಮರವೂರಿನಲ್ಲಿ ನಡೆದಿದೆ.
ಗಾಯಗೊಂಡ ಬೈಕ್ ಸವಾರರು ಕಟೀಲು ಮೂಲದವರು ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

