ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.

ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಪ್ರಯಾಣ ಬೆಳೆಸಿದೆ.
ಅಂತರಿಕ್ಷಯಾನ ಕೈಗೊಂಡ ಎರಡನೇ ಗಗನಯಾತ್ರಿ ಎಂಬ ಕೀರ್ತಿಗೆ ಶುಭಾಂಶು ಶುಕ್ಲಾ ಭಾಜನರಾಗಿದ್ದಾರೆ.

ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ನಾಲ್ವರುಗಗನಯಾತ್ರಿಗಳು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ.
ಜೊತೆಗೆ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ನಡೆಸಲಿದ್ದಾರೆ.


