ಮಂಗಳೂರು : ಕರಾವಳಿಯ ದಕ್ಸಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದ್ದು , ಅಡಿಕೆ ,ಕರಿಮೆಣಸು , ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆವಿಮೆ ಮಾಡಲು ಪ್ರಿಮಿಯಂ ಪಾವತಿಸಲು ಪ್ರಾರಂಭವಾಗಿದ್ದು , ಬೆಳೆಸಾಲ ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕ ಮಾಡಿ ನೋಂದಾವಣೆ ಮಾಡಿಸಿ ಪ್ರಿಮಿಯಂ ಮೊತ್ತ ಪಾವತಿಸಬಹುದಾಗಿದೆ . ಬೆಳೆ ಸಾಲ ಹೊಂದಿಲ್ಲದ ರೈತರು ಸಹ ಈ ಯೋಜನೆಯಡಿಯಲ್ಲಿ ಪ್ರಿಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ .

ರೈತರು ತಾವು ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಫಾರ್ಮರ್ ಐಡಿ ಹೊಂದಿರಬೇಕು ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಎಕರೆ ಒಂದಕ್ಕೆ ರೂ 2590/- ಮತ್ತು ಕರಿಮೆಣಸು ಎಕರೆ ಒಂದಕ್ಕೆ ರೂ 951/- ವಿಮೆ ಕಂತು ಪಾವತಿಸಬೇಕಾಗುತ್ತದೆ .

ಈ ಯೋಜನೆಯ ನೋಂದಾವಣಿಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು , ಬೆಳೆಸಾಲ ಪಡೆದಿರುವ ಎಲ್ಲಾ ರೈತ ಬಾಂದವರು ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಕಾರ್ಡ್ , ಬ್ಯಾಂಕ್ ಪುಸ್ತಕ ಹಾಗೂ ನಾಮಿನಿಯ ಆಧಾರ್ ನೊಂದಿಗೆ ನಿಗದಿತ ಅವಧಿಯೊಳಗೆ ತಮ್ಮ ಕಾರ್ಯ ವ್ಯಾಪ್ತಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಛೇರಿಗಳನ್ನು ಸಂಪರ್ಕಿಸಿ ಬೆಳೆವಿಮೆ ಯೋಜನೆ ಪ್ರಯೋಜನ ಪಡೆಯಬೇಕೆಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ರೈತರಿಗೆ ವಿನಂತಿ ಮಾಡಿದ್ದಾರೆ.

