ಪುತ್ತೂರು: ಬನ್ನೂರು ಆನೆಮಜಲು ಪ್ರದೇಶದ ಕ್ರೈಸ್ತ ದಫನ್ ಭೂಮಿಯಲ್ಲಿ ದುಷ್ಕರ್ಮಿಗಳು ಸಮಾಧಿಯೊಂದನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಈ ಕುರಿತು ಬನ್ನೂರು ಸಂತ ಅಂತೋಣಿ ಚರ್ಚ್‌ನ ಧರ್ಮಗುರು ಫಾ. ಬಾಲ್ತಿಜಾರ್ ಪಿಂಟೋ ಅವರು ಜೂನ್ 14 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ರಿ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳ ಪತ್ತೆಗಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

