ಸುಳ್ಯ: ಕೆ.ಎಸ್.ಆರ್.ಟಿ.ಸಿ ಬಸ್‌ಗಳ ನಡುವೇ ಅಪಘಾತ ಸಂಭವಿಸಿ ಒರ್ವ ಮಹಿಳೆ ಮೃತಪಟ್ಟು, ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ತಾಲೂಕಿನ ಅರಂತೋಡುನ ಉದಯನಗರ ಸಮೀಪದಲ್ಲಿ ಜೂನ್ 25 ರಂದು ನಡೆದಿದೆ.

ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಹಾಗೂ ಮೈಸೂರಿನಿಂದ ಮಂಗಳೂರು ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅರಂತೋಡು ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಳೆಯ ಕಾರಣದಿಂದ ಚಾಲಕರ ನಿಯಂತ್ರಣ ತಪ್ಪಿ, ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಗೆ ಕಾರಣವಾಗಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದು, ಕುಶಾಲನಗರದ ಕಗ್ಗೋಡು ಗ್ರಾಮದ ಭಾರತಿ (50) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕರು, ಉಪನಿರೀಕ್ಷಕರು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

