ಮಂಗಳೂರು: ಇಲ್ಲಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಮುಸ್ತಫಾ ಬಸ್ತಿಕೋಡಿ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 9ನೇ ಅಕಾಡೆಮಿಕ್ ಸೆನೆಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಅವರ ನೇಮಕಾತಿಯ ಬಗ್ಗೆ ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ.
ಅಕಾಡೆಮಿಕ್ ಸೆನೆಟ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತದೆ. ಪ್ರಮುಖ ಶೈಕ್ಷಣಿಕ ಕಾರ್ಯತಂತ್ರಗಳು ಮತ್ತು ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಡಾ. ಮುಸ್ತಫಾ ಬಸ್ತಿಕೋಡಿ ಅವರನ್ನು ಸೆನೆಟ್‌ನಲ್ಲಿ ಸೇರಿಸಿಕೊಂಡಿರುವುದು ತಾಂತ್ರಿಕ ಶಿಕ್ಷಣ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತಕ್ಕೆ ಅವರು ನೀಡಿರುವ ಕೊಡುಗೆಗಳಿಗೆ ಸಂದ ಗೌರವವಾಗಿದೆ ಎಂದು ಪ್ರಕಟಣೆ ತಿಳಿಸಿದೆ.




