ಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಕೊಡಿಯಾಲಗುತ್ತು (ಪಶ್ಚಿಮ)ಬಳಿ ಗಾಂಜಾ ಸೇವನೆ ಮಾಡಿದ್ದ ಇಬ್ಬರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಅಶೋಕನಗರ ನಿವಾಸಿ ಡ್ಯಾನಿಶ್ (23) ಮತ್ತು ಸುರತ್ಕಲ್ ಹೊಸಬೆಟ್ಟು ನಿವಾಸಿ ಅಖೀಲ್ (22) ಎಂದು ಗುರುತಿಸಲಾಗಿದೆ.

ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಉತ್ತರ ನೀಡಲು ತಡವರಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.

ಇಬ್ಬರ ವಿರುದ್ಧವೂ ಎನ್‌ಡಿಪಿಎಸ್ ಕಾಯ್ದೆಯಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


