Breaking
25 Sep 2026, Fri

ಸಹಪಾಠಿಯಿಂದಲೇ ದೈಹಿಕ ಸಂಪರ್ಕ ಪ್ರಕರಣ : ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗಭಾ೯ವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಜೂನ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂತ್ರಸ್ತೆ (21) ಪುತ್ತೂರು ನಗರ ಸಭೆಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಈಗಾಗಲೇ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *