Breaking
22 Mar 2026, Sun

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊವ೯ರಿಗೆ ಕಾರು ಢಿಕ್ಕಿ: ಚಾಲಕ ಪೊಲೀಸ್ ವಶಕ್ಕೆ

ಮಂಗಳೂರು: ಪಂಪ್‌ವೆಲ್-ಎಕ್ಕೂರು ನಡುವಿನ ಗೋರಿಗುಡ್ಡ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಯೊವ೯ರಿಗೆ ಕಾರು ಢಿಕ್ಕಿಯಾದ ಘಟನೆ ನಡೆದಿದೆ.

ಗಾಯಗೊಂಡವರನ್ನು ಅನುಪಮಾ (67) ಎಂದು ಗುರುತಿಸಲಾಗಿದೆ.

ಸ್ಥಳೀಯ ನಿವಾಸಿ ಅನುಪಮಾ ಅವರು ಗೋರಿಗುಡ್ಡೆ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಜಪ್ಪಿನಮೊಗರು ಕಡೆಯಿಂದ ಬಂದ ಕಾರು ಢಿಕ್ಕಿಯಾಗಿದೆ. ಇದರಿಂದಾಗಿ ಅನುಪಮಾ ಅವರ ತಲೆಗೆ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಢಿಕ್ಕಿ ಹೊಡೆದ ಕಾರಿನ ಚಾಲಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಸಿಸಿ ಕೆಮರಾ ದೃಶ್ಯಾವಳಿಯ ಆಧಾರದಲ್ಲಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *