ಚಿಕ್ಕಮಗಳೂರು: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ಪಲ್ಟಿಯಾಗಿ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಕೊಪ್ಪ ತಾಲೂಕಿನ ಸೀಗೋಡು ಬಳಿ ಇಂದು (ಜೂ.28) ಮುಂಜಾನೆ ನಡೆದಿದೆ.

ಗಾಯಗೊಂಡವರನ್ನು ಕಾರ್ತಿಕ್, ಮಧು, ಚೈತ್ರ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಜನ ಸ್ನೇಹಿತರು ವೀಕೆಂಡ್ ಪ್ರವಾಸಕ್ಕೆಂದು ಬೆಂಗಳೂರಿನಿಂದ ಆಗುಂಬೆ ಕಡೆಗೆ ಬರುತ್ತಿದ್ದರು ಎನ್ನಲಾಗಿದೆ .

ಈ ವೇಳೆ ಕೊಪ್ಪ ತಾಲೂಕಿನ ಸೀಗೋಡು ಬಳಿ ಬರುತ್ತಿದ್ದಂತೆ ಚಾಲಕ ನಿದ್ದೆಗೆ ಜಾರಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಪ್ರವಾಸಿ ಬಸ್ ರಸ್ತೆ ಬದಿ ಪಲ್ಟಿಯಾಗಿದೆ ಎನ್ನಲಾಗಿದೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

