ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಕೆಮ್ಮಿಂಜೆ ನಿವಾಸಿ ಕೀರ್ತಿ ಯಾನೆ ರಕ್ಷಿತ್ ಜೋಗಿ(30) ಎಂದು ಗುರುತಿಸಲಾಗಿದೆ.

ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೀರ್ತಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಅವರು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸಿ ಗಮನ ಸೆಳೆದಿದ್ದರು.

