ಬಂಟ್ವಾಳ: ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆಯಲ್ಲಿ ವ್ಯಕ್ತಿಯೊಬ್ಬರು ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಧಾರ್ಮಿಕ ಮುಂದಾಳು ರಾಜೇಶ್ ಕುಲಾಲ್ ಕುಕ್ಕಾಜೆ( 44) ಎಂದು ಗುರುತಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಜ್ವರ ಕಡಿಮೆಯಾಗದ ಹಿನ್ನೆಲೆ ಜೂ. 25 ರಂದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿದ್ದ ರಾಜೇಶ್ ಕುಲಾಲ್, ಸ್ಥಳೀಯ ಕುಕ್ಕಾಜೆ ಯುವಕ ಮಂಡಲದ, ಶ್ರೀ ಸಿದ್ದಿವಿನಾಯಕ ಮಂದಿರ ಕುಕ್ಕಾಜೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
