ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಯಡಕುಮೇರಿ ಹತ್ತಿರ ಗುಡ್ಡಜರಿತದಿಂದ ಸ್ಥಗಿತಗೊಂಡಿದ್ದ ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ಇದೀಗ ಮತ್ತೆ ಪುನರಾರಂಭಗೊಂಡಿದೆ.

ಜೂ.21ರಂದು ಗುಡ್ಡ ಜರಿದಿದ್ದರಿಂದ ಬಂಡೆಗಳು ಹಳಿಯ ಮೇಲೆ ಕುಸಿದು ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಕಾರಣದಿಂದ ಬೆಂಗಳೂರು- ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಳಿಯ ಮೇಲೆ ಬಿದ್ದ ಬಂಡೆಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ರೈಲು ಸಂಚಾರ ಮತ್ತೆ ಆರಂಭಗೊಂಡಿದ್ದು, ಯಾವುದೇ ಅಪಾಯವಿಲ್ಲದೆ ರೈಲುಗಳು ನಿರ್ವಿಘ್ನವಾಗಿ ಚಲಿಸುತ್ತಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

