Breaking
19 Sep 2026, Sat

ಮದ್ದು ಸಿಂಪಡಣೆ ವೇಳೆ ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಸಾವು

ಕೊಕ್ಕಡ: ಅರಸಿನಮಕ್ಕಿ ಬಳಿಯ ಎಂಜಿರ ಎಂಬಲ್ಲಿ ಅಡಿಕೆ ಮರಕ್ಕೆ ಮದ್ದು ಸಿಂಪಡಣೆ ವೇಳೆ ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಉಡೈರೆ ಕೃಷ್ಣಪ್ಪ ಕುಲಾಲ್(49ವ) ಎಂದು ಗುರುತಿಸಲಾಗಿದೆ.

ತೋಟವೊಂದರಲ್ಲಿ ಅಡಿಕೆ ಮರಗಳಿಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ಮದ್ದು ಸಿಂಪಡನೆ ಮಾಡುತಿದ್ದ ಅವರು ವಿದ್ಯುತ್ ಅಪಘಾತದಿಂದ ಮೃತ ಪಟ್ಟಿದ್ದಾರೆ. ವಿದ್ಯುತ್ ಆಘಾತಕ್ಕೊಳಗಾಗಿ ಬಿದ್ದ ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಲಲಿತ, ಪುತ್ರ ಯತೀಶ್, ಪುತ್ರಿ ಶಿಲ್ಪಾರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *