Breaking
10 Jul 2025, Thu

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಶಿವಮೊಗ್ಗ: ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದು ಘಟನೆ ಹೊಸ ನಗರ ತಾಲೂಕಿನ ತೋಟದ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಕೊಪ್ಪ ಗ್ರಾಮದ ನಿವಾಸಿಯಾಗಿರುವ ವಿಜಯ ಕುಮಾರ್ ಎಂಬುವವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದುವ ಮೂಲಕ ದುಷ್ಕರ್ಮಿ ಗಳು ವಿಕೃತಿ ಮೆರೆದಿದ್ದಾರೆ.

ಈ ದೃಶ್ಯವನ್ನು ಗಮನಿಸಿದ ಸ್ಥಳೀಯರು ಹಸುವಿನ ಮಾಲಕರಿಗೆ ವಿಷಯ ತಿಳಿಸಿದ್ದು ಹಸುವಿಗೆ ಚಿಕಿತ್ಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಸಂಘಟನೆ ಸೇರಿದಂತೆ, ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *