Breaking
8 Oct 2025, Wed

ಮಾಣಿ ಬಳಿ ಜೀಪ್-ಲಾರಿ ಅಪಘಾತ: ಚಾಲಕನಿಗೆ ಗಾಯ

ಪುತ್ತೂರು: ಜೀಪ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಜೀಪ್ ಚಾಲಕ ಗಾಯಗೊಂಡಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಜೂನ್ 29 ರಂದು ಸಂಜೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ದೇವಸ್ಯ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್‌ ಪಾಣಾಜೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಅವರು ತಕ್ಷಣವೇ ಗಾಯಗೊಂಡ ಮನೋಜ್ ಅವರನ್ನು ತಮ್ಮ ವಾಹನದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *