ಬನ್ನೇರುಘಟ್ಟ: ಮಾಂಸಕ್ಕಾಗಿ ಜಿಂಕೆಯನ್ನು ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಕೋಲಾರದ ಬನ್ನೇರುಘಟ್ಟ ಅರಣ್ಯದಲ್ಲಿ ನಡೆದಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಬಂದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಬನ್ನೇರುಘಟ್ಟ ರಸ್ತೆಯಲ್ಲಿ ದಾಳಿ ನಡೆಸಿದರು.
ಕಾರ್ಯಾಚರಣೆಯಲ್ಲಿ 2 ಕಾರು, 1 ಬೈಕ್, ಹಾಗೂ 2 ಬಂದೂಕುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ತನಿಖೆಯ ವೇಳೆ ಆರೋಪಿಯು ಕೋಲಾರ ಹಾಗೂ ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

