Breaking
22 Mar 2026, Sun

ಬಿ.ಸಿ.ರೋಡಿನಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಜೂನ್ 30ರಂದು ಮಧ್ಯಾಹ್ನದ ವೇಳೆ ನಡೆದಿದೆ.

ಮೃತಪಟ್ಟ ಸವಾರನನ್ನು ತಾಲೂಕಿನ ಶಂಭೂರು ಕೊಪ್ಪಳ ನಿವಾಸಿಯಾಗಿರುವ ಚಿದಾನಂದ (50) ಎಂದು ಗುರುತಿಸಲಾಗಿದೆ.

ಇವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಅನ್ನುವ ಮಾಹಿತಿ ಲಭ್ಯವಾಗಿದೆ.

ಇವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಬಳಿ ದ್ವಿಚಕ್ರ ವಾಹನವನ್ನು ಕ್ರಾಸ್ ಮಾಡುವ ವೇಳೆ ಬಿ.ಸಿ ರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *