ಮಂಜೇಶ್ವರ: 11 ವರ್ಷದ ಅಂಗವಿಕಲ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರಿನಲ್ಲಿ ಜೂನ್ 28ರಂದು ನಡೆದಿದೆ.
ಆರೋಪಿಯನ್ನು ಶೇಖ್ ಅಪ್ಪ (57)ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಮುಸ್ಲಿಂ ಲೀಗ್‌ನ ನಾಯಕನಾಗಿದ್ದು, ತನ್ನ ಅಂಗಡಿಗೆ ಬಾಲಕಿ ಬಂದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಬಾಲಕಿ ಮನೆಯವರಿಗೆ ಈ ಬಗ್ಗೆ ವಿಷಯ ತಿಳಿಸಿದ್ದು,ರಾತ್ರಿ ಆದ ಹಾಗೆ ಬಾಲಕಿಗೆ ಜ್ವರ ಬಂದುದರಿಂದ ಮನೆಯವರು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಾರೆ.ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು,ಜೂನ್ 29ರಂದು ಸಂಜೆ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆಗೆ ಸ್ಥಳೀಯರು ತೀವ್ರವಾದ ವಿರೋಧ ವ್ಯಕ್ತಪಡಿಸಿದ್ದು, ಪ್ರಕರಣದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.



