ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ – ಬೆಂಗಳೂರು ರಸ್ತೆಯ ಬೊಳ್ಳುಕಲ್ಲು ಎಂಬಲ್ಲಿ ಜೂನ್ 30ರಂದು ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಕಡೇಶಿವಾಲಯ ನಿವಾಸಿ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಪ್ಪು ಕಲ್ಲಿನ ಕೆತ್ತನೆ (ಶಿಲ್ಪಿ) ಯ ಕೆಲಸ ಮಾಡುತ್ತಿರುವ ರಂಜಿತ್ ಅವರು ಕಡೇಶಿವಾಲಯ ಮನೆಯಿಂದ ಶಂಭೂರು ಕಡೆಗೆ ಕಾರಿನಲ್ಲಿ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



