Breaking
21 Mar 2026, Sat

ಮಂಗಳೂರು ಸಹಿತ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಸ್ಫೋಟದ ಬೆದರಿಕೆ!

ಮಂಗಳೂರು: ಮಂಗಳೂರು ಸಹಿತ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಜೂನ್ 29ರಂದು ಬಾಂಬ್ ಸ್ಫೋಟದ ಬೆದರಿಕೆಯ ಇ-ಮೇಲ್ ಬಂದಿದ್ದು ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಇ-ಮೇಲ್ ಬಂದಿದೆ ಎನ್ನಲಾಗಿದೆ. ಈ ಬೆನ್ನಲ್ಲೆ ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶಿಸುವ ಎಲ್ಲಾ ಪ್ರಯಾಣಿಕರು ಮತ್ತು ಸಾರ್ವಜನಿಕರನ್ನು ಕಠಿಣ ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಅಧಿಕೃತ ಮೂಲಗಳ ಪ್ರಕಾರ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ಘಟಕ, ಸ್ಥಳೀಯ ಪೊಲೀಸರು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಸಂಸ್ಥೆಗಳು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ ಎಂದು ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *