Breaking
15 Jul 2026, Wed

ಉಡುಪಿ : ಹಸುವಿನ ರುಂಡ ಪತ್ತೆ ಪ್ರಕರಣ: 6 ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲುವಿನ ರಾಮ ಮಂದಿರದ ಬಳಿ ಜೂನ್ 28ರ ತಡರಾತ್ರಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬ್ರಹ್ಮಾವರ ತಾಲೂಕಿನ ಕುಂಜಾಲುವಿನ ನಿವಾಸಿಗಳಾದ ರಾಮ (49), ಪ್ರಸಾದ್ (21), ಸಂದೇಶ್ (35), ರಾಜೇಶ್ (28), ನವೀನ್ ಮಟಪಾಡಿ (35) ಕೇಶವ ನಾಯ್ಕ್ ಅಡ್ಜಿಲ್ (50) ಎಂದು ಗುರುತಿಸಲಾಗಿದೆ.

ಹಿಂದು ಸಂಘಟನೆಗಳು ಮತ್ತು ಹಲವು ಕಾಂಗ್ರೆಸ್ ನಾಯಕರ ಮನವಿ ಜೊತೆಗೆ ಹೋರಾಟದ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ತನಿಖೆಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನಾಲ್ಕು ತಂಡಗಳನ್ನು ರಚಿಸಿದ್ದು, ಘಟನೆ ನಡೆದು 24 ಗಂಟೆಯೊಳಗಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *